ನವದೆಹಲಿ: ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಸೋಮವಾರ) ಭೇಟಿ ಮಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆತಿಶಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

‘ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಲಾಯಿತು. ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಸಂಪೂರ್ಣ ಸಹಕಾರ ದೊರೆಯುತ್ತದೆ ಎಂದು ನಾನು ಭಾವಿಸುತ್ತೇನೆ‘ ಎಂದು ಆತಿಶಿ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
.ಬಾಬಾ ಸಿದ್ದೀಕಿ, ಅವರ ಮಗ ಜೀಶನ್ ಇಬ್ಬರೂ ನಮ್ಮ ಗುರಿಯಾಗಿದ್ದರು: ಆರೋಪಿಗಳ ಹೇಳಿಕೆ.ಮಧ್ಯ ಗಾಜಾದ ಶಾಲೆಯ ಮೇಲೆ ಇಸ್ರೇಲ್ ವಾಯು ದಾಳಿ: 20 ಮಂದಿ ಸಾವು.
ದೆಹಲಿ ಮುಖ್ಯಮಂತ್ರಿಯಾದ ಬಳಿಕ ಆತಿಶಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು, ಸೆಪ್ಟೆಂಬರ್ 13ರಂದು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದರು. ಬಳಿಕ ಅಚ್ಚರಿ ಎನ್ನುವಂತೆ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿ ರಾಜೀನಾಮೆ ನೀಡಿದ್ದರು.

ಬಳಿಕ ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದ್ದರು. ನಿರ್ಗಮಿತ ಸಿಎಂ ನಿರ್ಧಾರವನ್ನು ಎಎಪಿಯು ಸರ್ವಾನುಮತದಿಂದ ಅಂಗೀಕರಿಸಿತ್ತು.
.ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ: ನಟ ಬೈಜು ಬಂಧನ, ಬಿಡುಗಡೆ.ತಿರುಪತಿ ತಿಮ್ಮಪ್ಪನ ಗುಡಿ ಮುಂದೆ ರೀಲ್ಸ್: YSRCP ಶಾಸಕನ ಸಂಗಾತಿ ಮೇಲೆ ಕೇಸ್!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.