ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರು ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜಾಮೀನು ಪಡೆದು ಇಂದು (ಮಂಗಳವಾರ) ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಬಿಭವ್ ಕುಮಾರ್ ಅವರನ್ನು ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಾಯಿತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ ಬಿಭವ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿತ್ತು.

‘ಬಿಭವ್ ಅವರು ಕೇಜ್ರಿವಾಲ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಬಾರದು ಮತ್ತು ಮುಖ್ಯಮಂತ್ರಿ ಕಚೇರಿಯು ಅವರಿಗೆ ಯಾವುದೇ ಅಧಿಕೃತ ಜವಾಬ್ದಾರಿ ನೀಡಬಾರದು’ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯನ್ ಅವರಿದ್ದ ಪೀಠ ಆದೇಶಿಸಿತ್ತು.

‘ಎಲ್ಲ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಬಿಭವ್ ಅವರು ಮುಖ್ಯಮಂತ್ರಿಗಳ ನಿವಾಸಕ್ಕೂ ತೆರಳಬಾರದು’ ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ‘ಇದು ಸಣ್ಣಪುಟ್ಟ ಗಾಯಗಳ ಪ್ರಕರಣವಾಗಿದ್ದು, ಈ ವಿಷಯದಲ್ಲಿ ಜಾಮೀನು ವಿರೋಧಿಸಬಾರದು' ಎಂದು ದೆಹಲಿ ಪೊಲೀಸರ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರಿಗೆ ನ್ಯಾಯಪೀಠ ಹೇಳಿತು. ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಮೇ 13ರಂದು ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರ ಮೇಲೆ ಬಿಭವ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
.ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಬಿಭವ್ಗೆ ಜಾಮೀನು.ಬಿಭವ್ ಕುಮಾರ್ ಜಾಮೀನು ಅರ್ಜಿ: ದೆಹಲಿ ಪೊಲೀಸರಿಗೆ ‘ಸುಪ್ರೀಂ’ ನೋಟಿಸ್.ಸಂಸದೆ ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಬಿಭವ್ .ಬಿಭವ್ ಬಂಧನ ಅಗತ್ಯವಾಗಿತ್ತು: ದೆಹಲಿ ಹೈಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.