ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸದಸ್ಯ ಎಂಜಿನಿಯರ್ ರಶೀದ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 28ರವರೆಗೆ ವಿಸ್ತರಿಸಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಸೆಪ್ಟೆಂಬರ್ 10ರಂದು ರಶೀದ್ ನ್ಯಾಯಾಲಯದ ಮೊರೆ ಹೋಗಿದ್ದರು. ರಶೀದ್ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿತ್ತು.

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಎಂಜಿನಿಯರ್, 2019ರಿಂದ ಜೈಲಿನಲ್ಲಿದ್ದಾರೆ. ರಶೀದ್ಗೆ ಈ ಹಿಂದೆ, ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯವು ಜುಲೈ 5ರಂದು ಪೆರೋಲ್ ನೀಡಿತ್ತು.

ಅವಾಮಿ ಇತ್ತೆಹಾದ್ ಪಾರ್ಟಿಯ (ಎಐಪಿ) ಪ್ರಭಾವಿ ನಾಯಕರಾಗಿರುವ ರಶೀದ್ ಅವರು ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿ, ಮಾಜಿ ಮುಖ್ಯಮಂತ್ರಿಯೂ ಆಗಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ್ದರು. ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸಾಧಿಸಿದ ಗೆಲುವು, ಅವರ ಪ್ರಭಾವ ಏನೆಂಬುದನ್ನು ತೋರಿಸಿಕೊಟ್ಟಿತ್ತು.
.ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರ: ಎಂಜಿನಿಯರ್ ರಶೀದ್ಗೆ ಮಧ್ಯಂತರ ಜಾಮೀನು.ಸಂಸದನಾಗಿ ಪ್ರಮಾಣವಚನಕ್ಕೆ ಜೈಲಿನಲ್ಲಿರುವ ಎಂಜಿನಿಯರ್ ರಶೀದ್ಗೆ ಎನ್ಐಎ ಅನುಮತಿ.ನಮಗೆ ಶಾಂತಿ ಬೇಕು, ಹೇರಿಕೆಯಲ್ಲ: ಸಂಸದ ಶೇಕ್ ಅಬ್ದುಲ್ ರಶೀದ್.ಜಮ್ಮು ಮತ್ತು ಕಾಶ್ಮೀರ: ಬದಲಾಗಲಿದೆಯೇ ರಾಜಕೀಯ ಲೆಕ್ಕಾಚಾರ? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.