ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್‌ನ ವಿಧಾನ ಪರಿಷತ್‌ಸದಸ್ಯೆ ಕೆ.ಕವಿತಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಜಾರ ಹಿಲ್ಸ್‌ನಲ್ಲಿರುವ ಕವಿತಾ ಅವರ ನಿವಾಸಕ್ಕೆ ಬೆಳಗ್ಗೆ 10 ಗಂಟೆ ಸುಮಾರಿಗೆ ಆಗಮಿಸಿದ ಸಿಬಿಐ ಅಧಿಕಾರಿಗಳು ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕವಿತಾ ಅವರ ನಿವಾಸದ ಒಳಗಡೆ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರೆ, ಅವರ ನಿವಾಸದ ಸುತ್ತ ನೂರಾರು ಸಂಖ್ಯೆಯಲ್ಲಿ ಅವರ ಬೆಂಬಲಿಗರು ಸೇರಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣಕಾಸು ವ್ಯವಹಾರ ನಡೆಸಲಾಗಿದೆಯೇ ಎಂದು ಅವರನ್ನು ಪ್ರಶ್ನೆ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಬಿಐ ವಿಚಾರಣೆಗೂ ಒಂದು ದಿನ ಮುಂಚಿತವಾಗಿಕವಿತಾ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಕವಿತಾ ಅವರ ನಿವಾಸದ ಬಳಿ ಕೆಲವು ಭಿತ್ತಿಪತ್ರ ಹಾಗೂ ಫೋಟೊ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

‘ಹೋರಾಟಗಾರರ ಮಗಳು ಎಂದೂ ಭಯ ಪಡುವುದಿಲ್ಲ‘’ನಿಮ್ಮ ಜೊತೆ ನಾವಿದ್ದೇವೆ ಕವಿತಕ್ಕ‘ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ್ದಾರೆ. ವಿಚಾರಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.