ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದಿನ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಮನೀಷ್ ಸಿಸೊಡಿಯಾ ಆರೋಪಿಸಿದ್ದು, ಮೇ 23ರ ಸಿಸಿಟಿವಿ ದೃಶ್ಯಾವಳಿಯನ್ನು ಸಂರಕ್ಷಿಸಿಡುವಂತೆ ದೆಹಲಿ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತ್ರವೇ ಸಿಸೊಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಅವಕಾಶ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರು ಸಹ ನ್ಯಾಯಾಲಯಕ್ಕೆ ಬರುವ ಹಿನ್ನೆಲೆಯಲ್ಲಿ ಅವರನ್ನು ಕರೆತರುವುದರಿಂದ ಗದ್ದಲ ಉಂಟಾಗುತ್ತದೆ ಎಂದು ಪೊಲೀಸರು ತಿಳಿಸಿದ್ದರು.

ಈ ಸಂಬಂಧ ಎರಡೂ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್, ಸಿಸೋಡಿಯಾ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸುವುದಕ್ಕೆ ಆದೇಶಿಸಿತು. ಆ ಬಳಿಕ ಸಿಸೋಡಿಯಾ ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಾಯಿತು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಮಾರ್ಚ್ 9ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು.

ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಈ ಮೊದಲು ಸಿಬಿಐ, ಸಿಸೋಡಿಯಾ ಅವರನ್ನು ಬಂಧಿಸಿತ್ತು. ಬಳಿಕ, ಇ.ಡಿ ಸಹ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿತ್ತು.

ಸಿಸೋಡಿಯಾ ಅವರನ್ನು ಪ್ರಕರಣದ ಪ್ರಮುಖ ಸಂಚುಕೋರ ಎಂದು ಕರೆದಿರುವ ಇ.ಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.