ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: ಮೆಟ್ರೋ ನಿಲ್ದಾಣದ ಬಳಿಯಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

26 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.
Published 13 ಅಕ್ಟೋಬರ್ 2023, 5:44 IST
Last Updated 13 ಅಕ್ಟೋಬರ್ 2023, 5:44 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ದೆಹಲಿ ಜಿಲ್ಲೆಯ ಉದ್ಯೋಗ ನಗರ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಇಂದು(ಅಕ್ಟೋಬರ್ 13) ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಉದ್ಯೋಗ ನಗರದ ಮೆಟ್ರೋ ನಿಲ್ದಾಣದ ಸಮೀಪವುರುವ ಹೆಚ್-10ನಲ್ಲಿರುವ ಡಾನಾ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 26 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇದಕ್ಕೂ ಮುನ್ನ ದೆಹಲಿಯ ಆರ್‌.ಕೆ ಪುರಂ ಪ್ರದೇಶದಲ್ಲಿನ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕಚೇರಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT