ವದೆಹಲಿ: ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ವಾಹನಗಳಿಗೆ ದೆಹಲಿ ಸರ್ಕಾರವು ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದೆ.

ಸರ್ಕಾರದ ವಾಹನ ನೀತಿ ಅಡಿಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಭಾನುವಾರ ತಿಳಿಸಿದ್ದಾರೆ.

ಈ ಬಗ್ಗೆ ದೆಹಲಿ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ರಾಷ್ಟ್ರರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಕ್ಷಣದಿಂದ ಜಾರಿಗೆ ಬರುವಂತೆ ಬ್ಯಾಟರಿ ಚಾಲಿತ ಎಲ್ಲ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಗೆಹ್ಲೋಟ್ ‘ದೆಹಲಿಗೆ ಅಭಿನಂದನೆಗಳು. ಐತಿಹಾಸಿ ಎಲೆಕ್ಟ್ರಿಕ್ ವಾಹನ ನೀತಿ ಘೋಷಣೆ ಮಾಡುವಾಗ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ದೆಹಲಿ ಸರ್ಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದೆ. ದೆಹಲಿಯ ಜನ ಶೀಘ್ರವೇ ಇತರ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತನೆಗೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.