ನವದೆಹಲಿ: ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಪತ್ರಕರ್ತೆ ಪ್ರಿಯಾ ರಮಣಿ ಅವರನ್ನು ಖುಲಾಸೆಗೊಳಿಸಿದ್ದ ಕೆಳಹಂತದ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಕೇಂದ್ರದ ಮಾಜಿ ಸಚಿವ ಎಂ.ಜೆ.ಅಕ್ಬರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಿಚಾರಣೆಗೆ ಮಾನ್ಯ ಮಾಡಿದೆ.

‘ಅರ್ಜಿ ಸ್ವೀಕರಿಸಲಾಗಿದೆ. ವಿಚಾರಣೆ ಪಟ್ಟಿಗೆ ಸೇರಿಸಲಾಗುವುದು’ ಎಂದು ನ್ಯಾಯಮೂರ್ತಿ ಮುಕ್ತಾ ಗುಪ್ತಾ ತಿಳಿಸಿದ್ದು, ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ನೋಟಿಸ್ ಜಾರಿ ಮಾಡಿದರು.

ರಮಣಿ ಅವರನ್ನು ಪ್ರತಿನಿಧಿಸಿದ್ದ ವಕೀಲ ಭವೂಕ್ ಚೌಹಾಣ್ ಅವರು, ಪ್ರತಿಕ್ರಿಯೆಯನ್ನು ದಾಖಲಿಸಲು ಸಮಯ ಕೇಳಿದರು. ಅಕ್ಬರ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ರಾಜೀವ್ ನಾಯರ್ ಅವರು, ತಾವು ಈ ಪ್ರಕರಣದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡುವಂತೆ ಕೋರುತ್ತಿಲ್ಲ ಎಂದು ಹೇಳಿದರು. ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಹಕ್ಕಿದೆ. ಹೀಗಾಗಿ, ಅರ್ಜಿ ಮಾನ್ಯ ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.