ನವದೆಹಲಿ : ಇಲ್ಲಿನ ಅನಾಜ್ ಮಂಡಿ ಪ್ರದೇಶದಲ್ಲಿ ಸಂಭವಿಸಿದ್ದಅಗ್ನಿ ಅವಘಡದ ಕುರಿತು ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

‘ಡಿಸೆಂಬರ್ 8ರಂದು ಈ ಅವಘಡ ನಡೆದಿದ್ದು, ಈ ವಿಚಾರದಲ್ಲಿ ನ್ಯಾಯಾಲಯವು ಇಷ್ಟು ಬೇಗ ಮಧ್ಯಪ್ರವೇಶಿಸುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಭವಿಷ್ಯದಲ್ಲಿ ಇಂಥ ಘಟನೆ ಮರುಕಳಿಸದಂತೆಯೂ ಕ್ರಮ ಕೈಗೊಳ್ಳುತ್ತಿವೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಹಾಗೂ ನ್ಯಾಯಮೂರ್ತಿ ಸಿ.ಹರಿ ಶಂಕರ್ ಅವರಿದ್ದ ಪೀಠ ತಿಳಿಸಿತು.

‘ಮುಂದಿನ ದಿನಗಳಲ್ಲಿ ಅವಘಡಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ, ಆ ವೇಳೆ ಮತ್ತೊಮ್ಮೆ ಮನವಿ ಸಲ್ಲಿಸಿ’ ಎಂದು ಅರ್ಜಿದಾರರಾದ ಅವಧ್ ಕೌಶಿಕ್ ಅವರಿಗೆ ಪೀಠ ಸಲಹೆ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.