ನವದೆಹಲಿ: ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿರುವ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ಕೋರಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಸೋಮವಾರ ಆತನಿಗೆ ನೋಟಿಸ್ ಜಾರಿ ಮಾಡಿದೆ.

ಯಾಸಿನ್‌ನನ್ನು ಆಗಸ್ಟ್ 9ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕೆಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರ ನ್ಯಾಯಪೀಠವು ವಾರಂಟ್ ಜಾರಿ ಮಾಡಿದೆ.

ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ಚಟುವಟಿಕೆಗಳಲ್ಲಿ ಯಾಸಿನ್ ತೊಡಗಿದ್ದುದರಿಂದ ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಪರಿಗಣಿಸಿ ಆತನಿಗೆ ಮರಣದಂಡನೆ ವಿಧಿಸಬೇಕು ಎಂದು ಎನ್‌ಐಎ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121ರ ಅಡಿಯಲ್ಲಿ ಹೊರಿಸಲಾಗಿದ್ದ ಆರೋಪವನ್ನು ಯಾಸಿನ್ ಒಪ್ಪಿಕೊಂಡಿದ್ದಾನೆ. ಈ ಕೃತ್ಯಕ್ಕೆ ಮರಣ ದಂಡನೆ ವಿಧಿಸಲು ಅವಕಾಶ ಇದೆ. ಹೀಗಾಗಿ, ಜೈಲು ಸುಪರಿಂಟೆಂಡೆಂಟ್ ಮೂಲಕ ಆತನಿಗೆ ನೋಟಿಸ್ ಜಾರಿ ಮಾಡುತ್ತೇವೆ’ ಎಂದು ನ್ಯಾಯಾಲಯ ಹೇಳಿದೆ.

ಕಾನೂನುಬಾಹಿರ ಚಟುವಟಿಕೆ ನಿಗ್ರಹ ಕಾಯ್ದೆ (ಯುಎಪಿಎ) ಹಾಗೂ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್ ಅಪರಾಧಿ ಎಂದು ಘೋಷಿಸಿದ್ದ ವಿಚಾರಣಾ ನ್ಯಾಯಾಲಯವು 2022ರ ಮೇ 24ರಂದು ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.