ನವದೆಹಲಿ: ಹಿಂದೂ ದೇವರ ಕುರಿತು 2018ರಲ್ಲಿ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವ ದೆಹಲಿ ಪೊಲೀಸರ ಕಾನೂನುಬದ್ಧತೆಯನ್ನು ಪ್ರಶ್ನಿಸಿ ‘ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್’ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಮಾಡಿದ ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಪೊಲೀಸರ ನಿಲುವನ್ನು ಕೇಳಿದೆ.

ನ್ಯಾಯಮೂರ್ತಿ ಸಂಜೀವ್ ನರೂಲ ಅವರು ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಜುಬೈರ್ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ವಿಚಾರಣಾ ನ್ಯಾಯಾಲಯದ ಜೂನ್ 28ರ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ತನಿಖಾ ಸಂಸ್ಥೆಗೆ ಎರಡು ವಾರಗಳ ಕಾಲಾವಕಾಶ ನೀಡಿದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದನ್ಯಾಯಮೂರ್ತಿ, ‘ಪ್ರಸ್ತುತ ಪ್ರಕ್ರಿಯೆಗಳಿಗೆ ಪ್ರಭಾವಿತರಾಗದೆ ವಿಚಾರಣಾ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳು ನಡೆಯಲಿವೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.