ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ; ಸೆ.21ರಂದು ಆತಿಶಿ ಪ್ರಮಾಣ!

Published : 18 ಸೆಪ್ಟೆಂಬರ್ 2024, 10:46 IST
Last Updated : 18 ಸೆಪ್ಟೆಂಬರ್ 2024, 10:46 IST
ಫಾಲೋ ಮಾಡಿ
Comments

ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ರಾಷ್ಟ್ರಪತ್ರಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ವರ್ಗಾಯಿಸಿದ್ದಾರೆ. ಹಾಗೆಯೇ, ಸಚಿವೆ ಆತಿಶಿ ಅವರು ಸೆಪ್ಟೆಂಬರ್‌ 21ರಂದು ಪ್ರಮಾಣ ಸ್ವೀಕರಿಸುವಂತೆ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಕಳೆದ ವಾರ ಜಾಮೀನು ಪಡೆದಿರುವ ಅವರು, ಜನರು ತಮಗೆ ಮತ್ತೊಮ್ಮೆ ಅಧಿಕಾರ ನೀಡುವವರೆಗೆ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು.

ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದ ಕೇಜ್ರಿವಾಲ್‌, ತಮ್ಮ ಉತ್ತರಾಧಿಕಾರಿಯಾಗಿ ಸಚಿವೆ ಆತಿಶಿ ಅವರ ಹೆಸರನ್ನು ಘೋಷಿಸಿದ್ದರು. ನಿರ್ಗಮಿತ ಮುಖ್ಯಮಂತ್ರಿಯ ನಿರ್ಧಾರವನ್ನು ಪಕ್ಷವು ಸರ್ವಾನುಮತದಿಂದ ಅಂಗೀಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT