ನವದೆಹಲಿ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ (ಕನ್ವೆನ್ಷನ್ ಸೆಂಟರ್) ಇಂದು (ಭಾನುವಾರ) ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಮುಖ ಮಾರುಕಟ್ಟೆಗಳು, ಚರ್ಚ್‌ಗಳು, ಮೆಟ್ರೊ ನಿಲ್ದಾಣ, ಬಸ್ ನಿಲ್ದಾಣ, ರೈಲು ನಿಲ್ದಾಣಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಸಿವಿಲ್ ಡ್ರೆಸ್ ಮತ್ತು ಪಿಸಿಆರ್‌ನಲ್ಲಿರುವ ಪೊಲೀಸರು ಜಾಗರೂಕರಾಗಿರಲು ತಿಳಿಸಲಾಗಿದೆ. ಜತೆಗೆ, ಅವರಿಗೆ ಬರುವ ಯಾವುದೇ ಮಾಹಿತಿಯನ್ನು ನಿರ್ಲಕ್ಷಿಸದಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಪೊಲೀಸರ ವಿಶೇಷ ಘಟಕವು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ.
.ಕೇರಳ ಕಳಮಶ್ಶೇರಿ ಸರಣಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ.Kalamassery Blast: ಸರ್ವಪಕ್ಷ ಸಭೆ ಕರೆದ ಕೇರಳ ಸಿಎಂ ಪಿಣರಾಯಿ ವಿಜಯನ್.ಸ್ಫೋಟ: ಕೇರಳ ಸಿಎಂ ಜೊತೆ ಅಮಿತ್ ಶಾ ಚರ್ಚೆ– ಎನ್ಎಸ್ಜಿ, ಎನ್ಐಎ ತಂಡಗಳು ದೌಡು .ಕೊಚ್ಚಿಯ ಸಮಾವೇಶ ಕೇಂದ್ರದಲ್ಲಿ ಸ್ಫೋಟಕ್ಕೆ ಐಇಡಿ ಬಳಕೆ: ಕೇರಳ ಡಿಜಿಪಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.