ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳಾ ಆಯೋಗದ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಮಹುವಾ ವಿರುದ್ಧ ಪ್ರಕರಣ

Published : 7 ಜುಲೈ 2024, 13:51 IST
Last Updated : 7 ಜುಲೈ 2024, 13:51 IST
ಫಾಲೋ ಮಾಡಿ
Comments

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹುವಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಡಿಯೊದಲ್ಲಿ, ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಪ್ರದೇಶದಿಂದ ರೇಖಾ ಶರ್ಮಾ ಬರುತ್ತಿರುವುದು ಕಂಡುಬಂದಿದೆ. ಈ ಪೋಸ್ಟ್‌ನಲ್ಲಿ ಮಹುವಾ ಕೆಲ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಲ ಸಮಯದ ಬಳಿಕ ಮಹುವಾ, ಪೋಸ್ಟ್ ಅನ್ನು ಅಳಿಸಿದ್ದಾರೆ.

ಮೂಲ ಪೋಸ್ಟ್‌ನ ವಿಡಿಯೊದಲ್ಲಿ ರೇಖಾ ಶರ್ಮಾ ಹಿಂದೆ ಛತ್ರಿ ಹಿಡಿದು ವ್ಯಕ್ತಿಯೊಬ್ಬ ಬರುತ್ತಿರುವ ದೃಶ್ಯ ಅದರಲ್ಲಿದೆ.

ಈ ಸಂಬಂಧ ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪತ್ರ ಬರೆದಿರುವ ಆಯೋಗ, ಮಹುವಾ ಅವರ ಹೇಳಿಕೆ ಖಂಡನಾರ್ಹ ಮತ್ತು ಸಂಸತ್ ಸದಸ್ಯರ ಘನತೆಗೆ ಸೂಕ್ತವದುದಲ್ಲ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದೇವೆ ಎಂದು ತಿಳಿಸಿದೆ.

ಹಣ ಪಡೆದ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ ಆರೋಪದ ಮೇಲೆ ಕಳೆದ ಲೋಕಸಭೆಯಿಂದ ಅವರನ್ನು ಅಮಾನತು ಮಾಡಲಾಗಿತ್ತು.

ಮಹುವಾ ಅವರ ಈ ಹೇಳಿಕೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79ರ ಅಡಿ ಬರುತ್ತದೆ. ಮಹಿಳಾ ಆಯೋಗವು ನಿಸ್ಸಂದಿಗ್ಧವಾಗಿ ಈ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹುವಾ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ, ಇದೊಂದು ಅಸಭ್ಯ, ಆಕ್ಷೇಪಾರ್ಹ ಮತ್ತು ನಾಚಿಕೆಗೇಡಿನದ್ದಾಗಿದೆ. ಇದು ಟಿಎಂಸಿಯ ನಿಜವಾದ ಮುಖ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT