ದೆಹಲಿ: ದೆಹಲಿ ಪೊಲೀಸ್ ಅನುಮತಿ ನಿರಾಕರಣೆ ಹೊರತಾಗಿಯೂ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ರಾಜ್‌ಘಾಟ್‌ನಲ್ಲಿ ಸಂಕಲ್ಪ ಸತ್ಯಾಗ್ರಹ ಹಮ್ಮಿಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಜೈರಾಮ್ ರಮೇಶ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖರು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಮತ್ತು ವಾಹನ ದಟ್ಟಣೆ ನಿಯಂತ್ರಿಸಲು ರಾಜ್‌ಘಾಟ್ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸ್ ತಿಳಿಸಿದೆ.

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್, ಎಲ್ಲ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಸಂಕಲ್ಪ ಸತ್ಯಾಗ್ರಹ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುಜರಾತ್‌ನ ನ್ಯಾಯಾಲಯವು ತೀರ್ಪು ನೀಡಿತ್ತು. ಬಳಿಕ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.