ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ದೆಹಲಿ ವಾಯುಮಾಲಿನ್ಯ ದಿನೇ ದಿನೇ ಹೆಚ್ಚುತ್ತಿದ್ದು, ಭಾನುವಾರ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯುಐ) ಗಂಭೀರ ಹಂತ ತಲುಪಿತ್ತು. ಬೆಳಿಗ್ಗೆ 9 ಗಂಟೆ ವೇಳೆಗೆ ಎಕ್ಯುಐ 429ಕ್ಕೆ ಏರಿಕೆಯಾಗಿತ್ತು.

ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಇರುವ ಮಾಹಿತಿ ಪ್ರಕಾರ, ನ.18ರಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು ಅರ್ಜಿಯನ್ನು ವಿಚಾರಣೆ ನಡೆಸಲಿದೆ.

ಈ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ನವೆಂಬರ್ 14ರಂದು ಕೋರ್ಟ್ ಒಪ್ಪಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.