ನವದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ದೆಹಲಿಯ ಸಾರಿಗೆ ಮತ್ತು ಪರಿಸರ ಸಚಿವ ಕೈಲಾಶ್ ಗೆಹಲೋತ್ ಅವರು ಇಂದು (ಭಾನುವಾರ) ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಪತ್ರ ಬರೆದಿದ್ದಾರೆ.

‘ದೆಹಲಿ ಸರ್ಕಾರವು ಕೇಂದ್ರದೊಂದಿಗೆ ಹೋರಾಟ ನಡೆಸುವುದರಲ್ಲೇ ಬಹುಪಾಲು ಸಮಯವನ್ನು ಕಳೆದರೆ ದೆಹಲಿಯ ನಿಜವಾದ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಎಎಪಿ ಪಕ್ಷದಿಂದ ಹೊರಬರುವುದನ್ನು ಬಿಟ್ಟು ನನಗೆ ಬೇರೆ ಯಾವುದೇ ಆಯ್ಕೆಯಿಲ್ಲ. ಆದ್ದರಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಗೆಹಲೋತ್ ತಿಳಿಸಿದ್ದಾರೆ.

‘ನಾವು ಜನರ ಹಕ್ಕುಗಳಿಗಾಗಿ ಹೋರಾಡುವ ಬದಲು ನಮ್ಮ ಸ್ವಂತ ರಾಜಕೀಯ ಕಾರ್ಯಸೂಚಿಗಾಗಿ ಮಾತ್ರ ಹೋರಾಡುತ್ತಿದ್ದೇವೆ. ಇದು ದೆಹಲಿಯ ಜನರಿಗೆ ಮೂಲಭೂತ ಸೇವೆಗಳನ್ನು ತಲುಪಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ’ ಎಂದು ಗೆಹಲೋತ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.