ನವದೆಹಲಿ: ವಕ್ಫ್ ಮಂಡಳಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮೂವರನ್ನು ದೆಹಲಿ ನ್ಯಾಯಾಲಯ ಡಿ.1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಝೀಶಾನ್ ಹೈದರ್, ದಾವೂದ್ ನಾಸಿರ್ ಹಾಗೂ ಜಾವೆದ್ ಇಮ್ಮಾಮ್ ಸಿದ್ಧಿಕಿ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಹೆಸರೂ ಕೇಳಿಬಂದಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಆರು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂಬ ಜಾರಿ ನಿರ್ದೇಶನಾಲಯ(ಇಡಿ)ದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.

‘ತನ್ನ ಕಕ್ಷಿದಾರರ ಬಂಧನ ಕಾನೂನು ಬಾಹಿರವಾಗಿದ್ದು, ಯಾವುದೇ ಪುರಾವೆಗಳಿಲ್ಲದೆ ತನ್ನ ವಶಕ್ಕೆ ನೀಡುವಂತೆ ಇಡಿ ಕೋರುತ್ತಿದೆ. ಆದರೆ ಈ ಪ್ರಕರಣದಲ್ಲಿ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ಅಪರಾಧ ನಡೆದ ಕುರಿತು ಯಾವುದೇ ಪುರಾವೆಗಳಿಲ್ಲ’ ಎಂದು ಆರೋಪಿಗಳ ಪರ ವಕೀಲ ನಿತೇಶ್ ರಾಣಾ ನ್ಯಾಯಾಲಯಕ್ಕೆ ಹೇಳಿದರು.

ದೆಹಲಿ ವಕ್ಫ್ ಮಂಡಳಿಯ ಕಾರ್ಯಾಧ್ಯಕ್ಷ ಅಮಾನತುಲ್ಲಾ ಖಾನ್ ಅವರು 32 ಮಂದಿಯನ್ನು ಸರ್ಕಾರಿ ನಿಯಮ ಮೀರಿ ನೇಮಕಾತಿ ಮಾಡಿಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.
.ವಕ್ಫ್ ಕಾಯ್ದೆ ವಿರುದ್ಧ ದೆಹಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ.ವಕ್ಫ್ ಅಧ್ಯಕ್ಷ ಚುನಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.