ನವದೆಹಲಿ: ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಯಮುನಾ ನದಿ ಪ್ರವಾಹ ಏರಿಕೆಯಾಗಿದೆ.

ದೆಹಲಿಯ ಯಮುನಾ ನದಿಯ ನೀರಿನ ಮಟ್ಟವು ಇಂದು (ಬುಧವಾರ) ಮತ್ತೊಮ್ಮೆ ಅಪಾಯದ ಮಟ್ಟವನ್ನು (205.39 ಮೀಟರ್) ಮೀರಿದೆ.

ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ನದಿ ನೀರಿನ ಮಟ್ಟ 205.33 ಮೀಟರ್ ರಷ್ಟಿತ್ತು ಎಂದು ಕೇಂದ್ರ ಜಲ ಮಂಡಳಿ (ಸಿಡಬ್ಲ್ಯೂಸಿ) ತಿಳಿಸಿದೆ.

ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಅಪಾಯ ಮಟ್ಟದಲ್ಲಿದ್ದ ಯಮುನಾ ನದಿ ನೀರಿನ ಹರಿವು ಇತ್ತೀಚೆಗೆ ತುಸು ತಗ್ಗಿತ್ತು. ಆದರೆ, ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ನದಿ ನೀರಿನ ಮಟ್ಟದಲ್ಲಿ ಮತ್ತೆ ಏರಿಕೆಯಾಗಿದೆ.

ಜುಲೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಯಮುನಾ ನದಿ ನೀರಿನ ಮಟ್ಟ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು, 208.65 ಮೀಟರ್‌ನಷ್ಟು ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.