ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆ ಹಂತದಲ್ಲಿಯೇ ಮುಂದುವರಿದಿದ್ದು, ಶುಕ್ರವಾರ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 373 ದಾಖಲಾಗಿತ್ತು. ಅದರ ಜತೆಗೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 11.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ದೆಹಲಿಯಲ್ಲಿ 38 ಮೇಲ್ವಿಚಾರಣಾ ಕೇಂದ್ರಗಳಲ್ಲಿ ಒಂಬತ್ತರಲ್ಲಿ ಎಕ್ಯೂಐ ತೀವ್ರ ಕಳಪೆ ಹಂತದ ವ್ಯಾಪ್ತಿಯಲ್ಲಿದೆ. ಆನಂದ ವಿಹಾರ್, ಬವಾನಾ, ಜಹಾಂಗಿರ್ಪುರಿ, ಮುಂಡ್ಕಾ, ನೆಹರೂ ನಗರ, ಶಾದಿಪುರ, ಸೋನಿಯಾ ವಿಹಾರ್, ವಿವೇಕ್ ವಿಹಾರ್, ವರ್ಜೀಪುರ ತೀವ್ರ ಕಳಪೆ ಹಂತದ ವ್ಯಾಪ್ತಿಯಲ್ಲಿರುವ ಪ್ರದೇಶಗಳಾಗಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳು ತಿಳಿಸಿವೆ.

ದೆಹಲಿಯಲ್ಲಿ ಭಾನುವಾರದಿಂದ ಗಾಳಿಯ ಗುಣಮಟ್ಟ ತೀವ್ರ ಅಪಾಯಕಾರಿ ಹಂತಕ್ಕೆ ಕುಸಿದಿತ್ತು. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆಯಿಂದ ‘ಜಿಆರ್ಎಪಿ –4’ (ಗ್ರೇಡೆಡ್ ರೆಸ್ಪಾನ್ಸ್ ಆ್ಯಕ್ಷನ್ ಪ್ಲ್ಯಾನ್) ನಿರ್ಬಂಧಗಳನ್ನು ದೆಹಲಿ ಸರ್ಕಾರ ಜಾರಿಗೊಳಿಸಿದೆ.

‘ರಾಷ್ಟ್ರೀಯ ತುರ್ತು ಪರಿಸ್ಥಿತಿ ಎಂದು ಪರಿಗಣಿಸಿ'

ಉತ್ತರ ಭಾರತದ ವಾಯು ಮಾಲಿನ್ಯವನ್ನು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಪರಿಗಣಿಸುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಪ್ರತಿಪಾದಿಸಿದ್ದಾರೆ. ಈ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮುಂಬರುವ ಸಂಸತ್ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ಚರ್ಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಾಯು ಮಾಲಿನ್ಯದ ಬಿಕ್ಕಟ್ಟು ಪರಿಹಾರಕ್ಕೆ ರಾಷ್ಟ್ರಮಟ್ಟದಲ್ಲಿ ಸಾಮೂಹಿಕ ಪ್ರಯತ್ನ ನಡೆಯಬೇಕಿದೆ. ಈ ವಿಷಯದಲ್ಲಿ ರಾಜಕೀಯದ ಆಟಗಳಿಂದ ಪ್ರಯೋಜನವಿಲ್ಲ ಎಂದು ಅವರು ಹೇಳಿದ್ದಾರೆ. ಪರಿಸರವಾದಿ ವಿಮಲೇಂದು ಝಾ ಅವರ ಜತೆಗೆ ಇಂಡಿಯಾ ಗೇಟ್ನಲ್ಲಿ ವಾಯುಮಾಲಿನ್ಯ ಕುರಿತು ತಾವು ಚರ್ಚಿಸಿದ ವಿಡಿಯೊವನ್ನು ರಾಹುಲ್ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ‘ವಾಯು ಮಾಲಿನ್ಯವು ನಮ್ಮ ಮಕ್ಕಳ ಭವಿಷ್ಯವನ್ನು ಕಸಿಯುತ್ತಿದೆ ಮತ್ತು ಹಿರಿಯರನ್ನು ಉಸಿರುಗಟ್ಟಿಸುವಂತೆ ಮಾಡುತ್ತಿದೆ. ಈ ಮೂಲಕ ಅಸಂಖ್ಯಾತರ ಜೀವನವನ್ನು ಹಾಳು ಮಾಡುತ್ತಿರುವ ಇದು ಪರಿಸರ ಮರ್ತು ಆರ್ಥಿಕ ವಿಪತ್ತಾಗಿದೆ’ ಎಂದು ಅವರು ಪೋಸ್ಟ್ನಲ್ಲಿ ಹೇಳಿದ್ದಾರೆ. ಕೃಷಿ ತ್ಯಾಜ್ಯ ಸುಡುವುದು ದೆಹಲಿಯ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣ ಎಂದು ವಿಡಿಯೊದಲ್ಲಿ ಹೇಳಿರುವ ಝಾ ಅವರು ಈ ಬಿಕ್ಕಟ್ಟನ್ನು ಪರಿಹರಿಸಲು ಜೀವನಶೈಲಿಯಲ್ಲೂ ಬದಲಾವಣೆಗಳಾಗಬೇಕಿದೆ ಎಂದು ಒತ್ತಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.