ನವದೆಹಲಿ: ಬಾಗಲ್ಪುರದಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಪಥಗಳ ಬೃಹತ್ ಸೇತುವೆ ಕುಸಿತಕ್ಕೆ ಬಿಜೆಪಿಯೇ ಕಾರಣ ಎಂದು ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಆರೋಪಿಸಿದ್ದಾರೆ.

ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಸೇತುವೆಗಳನ್ನು ನಿರ್ಮಿಸುತ್ತಿದ್ದೇವೆ. ಆದರೆ, ಕೇಸರಿ ಪಕ್ಷದವರು (ಬಿಜೆಪಿ) ಅವುಗಳನ್ನು ಕೆಡವುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸೇತುವೆ ಕುಸಿತ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಬಿಹಾರ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಬಾಗಲ್ಪುರ ಜಿಲ್ಲೆಯಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಅಂದಾಜು ₹1,700 ಕೋಟಿ ವೆಚ್ಚದ ನಾಲ್ಕು ಪಥಗಳ ಬೃಹತ್ ಸೇತುವೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ. ನಿರ್ಮಾಣ ಹಂತದ ಸೇತುವೆ ವರ್ಷ ತುಂಬುವುದರಲ್ಲಿ ಕುಸಿದು ಬಿದ್ದಿರುವುದು ಇದು ಎರಡನೇ ಬಾರಿ. ಕಳೆದ ಡಿಸೆಂಬರ್ನಲ್ಲಿ ಎರಡು ತುಂಡಾಗಿ ಬಿದ್ದಿತ್ತು.

ಸೇತುವೆ ಗಂಗಾನದಿಯಲ್ಲಿ ಕುಸಿದುಬೀಳುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಯಾವುದೇ ಸಾವು– ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮುಖ್ಯಮಂತ್ರಿ ನಿತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ.

ಸುಲ್ತಾನ್ಗಂಜ್ ಮತ್ತು ಖಗಾಡಿಯಾ ಜಿಲ್ಲೆಗಳನ್ನು ಸಂಪರ್ಕಿಸುವ ಈ ಸೇತುವೆಯನ್ನು ನಿರ್ಮಾಣ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ 2014ರಲ್ಲಿ ಉದ್ಘಾಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.