ನವದೆಹಲಿ: ‘ಯಮುನಾ ನದಿಯಲ್ಲಿ ನೀರಿನ ಪ್ರಮಾಣ ಕುಸಿಯುತ್ತಿದೆ. ಇದರಿಂದಾಗಿ ದೆಹಲಿಯ ಹಲವೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಮುಂಬರುವ ದಿನಗಳಲ್ಲಿ ಇದು ಆಸ್ಪತ್ರೆಗಳ ಮೇಲೆಯೂ ಪರಿಣಾಮ ಬೀರಲಿದೆ’ ಎಂದು ದೆಹಲಿ ಜಲ ಮಂಡಳಿಯ (ಡಿಜೆಬಿ) ಉಪಾಧ್ಯಕ್ಷ ರಾಘವ್ ಛಡ್ಡಾ ಶನಿವಾರ ತಿಳಿಸಿದ್ದಾರೆ.

‘ಯಮುನಾ ನದಿಗೆ ನೀರು ಬಿಡುಗಡೆ ಮಾಡುವ ಮೂಲಕ ದೆಹಲಿಗೆ ಕುಡಿಯುವ ನೀರು ಲಭ್ಯವಾಗುವಂತೆ ಮಾಡಬೇಕು’ ಎಂದು ರಾಘವ್ ಅವರು ಹರಿಯಾಣದ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರನ್ನು ಒತ್ತಾಯಿಸಿದ್ದಾರೆ.

‘ಯಮುನಾದಲ್ಲಿ ನೀರಿನ ಮಟ್ಟ ಕುಸಿಯುತ್ತಿರುವ ಕಾರಣ ಮೂರು ನೀರು ಸಂಸ್ಕರಣಾ ಘಟಕಗಳಲ್ಲಿ ನೀರಿನ ಸಂಸ್ಕರಣೆ ಕಡಿಮೆಯಾಗಿದೆ. ಇದು ಹಲವಾರು ವಸತಿ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯಕ್ಕೆ ಕಾರಣವಾಗಿದೆ’ ಎಂದು ಅವರು ಹೇಳಿದ್ದಾರೆ.

‘ಮುಂಬರುವ ದಿನಗಳಲ್ಲಿ ದೆಹಲಿಯ ಆಸ್ಪತ್ರೆಗಳಲ್ಲಿ ನೀರಿನ ಸಮಸ್ಯೆಗೂ ಇದು ಕಾರಣವಾಗಬಹುದು. ಕೋವಿಡ್ ಪ್ರಕರಣಗಳಿಂದ ತತ್ತರಿಸುವ ದೆಹಲಿಗೆ ನೀರು ಪೂರೈಸಿ ನೆರವು ನೀಡಬೇಕು’ ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ... ಪಂಚಾಯತ್ ಚುನಾವಣೆ: ಯುಪಿ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ಪ್ರಿಯಾಂಕಾ ಗರಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.