ಧನ್‌ಬಾದ್: ಧನ್‌ಬಾದ್ ಕೋರ್ಟ್‌ನ ನ್ಯಾಯಾಧೀಶರಾಗಿದ್ದ ಉತ್ತಮ್ ಆನಂದ್ ಅವರ ಸಾವಿನ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇದಕ್ಕೂ ಮುನ್ನ ಆರೋಪಿಗಳನ್ನು ಏಳು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿತ್ತು.

ಜಿಲ್ಲಾ ನ್ಯಾಯಾಧೀಶರಾಗಿದ್ದ ಉತ್ತಮ್ ಆನಂದ್ ಅವರು (49) ಜುಲೈ 28ರಂದು ಧನ್‌ಬಾದ್‌ನ ರಣಧೀರ್ ವರ್ಮಾ ಚೌಕ್ ಬಳಿ ವಾಯುವಿಹಾರಕ್ಕೆ ತೆರಳಿದ್ದಾಗ ಆಟೋರಿಕ್ಷಾವೊಂದು ಡಿಕ್ಕಿ ಹೊಡೆದಿತ್ತು. ಅವರು ಸ್ಥಳದಲ್ಲಿಯೇ ಶಂಕಾಸ್ಪದವಾಗಿ ಸಾವಿಗೀಡಾಗಿದ್ದರು. ತಕ್ಷಣವೇ ಆಟೋರಿಕ್ಷಾ ಚಾಲಕ ಸ್ಥಳದಿಂದ ಪರಾರಿಯಾಗಿದ್ದ.

ದೆಹಲಿಯ ಸಿಬಿಐ ತಂಡವು ಆರೋಪಿಗಳಾದ ಆಟೋರಿಕ್ಷಾ ಚಾಲಕ ಲಖನ್ ವರ್ಮಾ ಮತ್ತು ಆತನ ಜತೆಗಾರ ರಾಹುಲ್ ವರ್ಮಾ ಅವರನ್ನು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಮತ್ತು ಸಿಬಿಐನ ವಿಶೇಷ ಮ್ಯಾಜಿಸ್ಟ್ರೇಟ್ ಅಭಿಷೇಕ್ ಶ್ರೀವಾಸ್ತವ ಅವರ ಎದುರು ಹಾಜರುಪಡಿಸಿತ್ತು. ಸಿಬಿಐನ ಮನವಿಯನ್ನು ಆಲಿಸಿದ ನ್ಯಾಯಾಲಯವು ಲಖನ್ ಮತ್ತು ರಾಹುಲ್ ಅವರನ್ನು ಧನ್‌ಬಾದ್ ಜೈಲಿಗೆ ಕಳುಹಿಸಲು ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.