ಭೋಪಾಲ್: ಬಿಜೆಪಿ ಭದ್ರ ಕೋಟೆಯಾಗಿರುವಭೋಪಾಲ್ ಲೋಕಸಭಾ ಕ್ಷೇತ್ರವನ್ನು ಗೆಲ್ಲಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ ಈ ಬಾರಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರಿಗೆ ಟಿಕೇಟ್ನೀಡಿದೆ.

ಇತ್ತ ಬಿಜೆಪಿಯು ಕೂಡ ರಣತಂತ್ರ ರೂಪಿಸುತ್ತಿದ್ದು ದಿಗ್ವಿಜಯ್ ಸಿಂಗ್ ಅವರ ಎದುರಾಳಿಯಾಗಿ ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬಿಫಾರಂ ನೀಡಲು ಚಿಂತನೆ ನಡೆಸಿದೆ.

1984ರಲ್ಲಿ ಮಾಜಿ ರಾಷ್ಟ್ರಪತಿ ದಿವಂಗತ ಶಂಕರ್ ದಯಾಳ್ ಶರ್ಮಾ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಅಲ್ಲಿಂದ ಇಲ್ಲಿಯವರೆಗೂ ಕಾಂಗ್ರೆಸ್ ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗಿಲ್ಲ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯದಿದ್ದರೂಕಾಂಗ್ರೆಸ್‌ಪಕ್ಷೇತರ ಶಾಸಕರ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿದೆ. ಕಾಂಗ್ರೆಸ್‌ನ ಕಮಲ್ ನಾಥ್ ಮುಖ್ಯಮಂತ್ರಿಯಾಗಿಅಧಿಕಾರ ನಡೆಸುತ್ತಿದ್ದಾರೆ. ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಜಯಗಳಿಸಿ 15 ವರ್ಷಗಳ ಕಾಲ ಆಡಳಿತ ನಡೆಸಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 107 ಸ್ಥಾನಗಳನ್ನು ಪಡೆದರೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ.

ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಬೇಕು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ರೂಪಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುವುದರಿದ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಕಷ್ಟವಾಗಲಾರದುಎಂಬುದು ಕಾಂಗ್ರೆಸ್ ಚಿಂತನೆಯಾಗಿದೆ. 29 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಗುರಿಯಾಗಿದೆ. ಇತ್ತ ಬಿಜೆಪಿಯೂ ಕೂಡ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ರಣತಂತ್ರವನ್ನು ರೂಪಿಸಿದೆ.

ಮಧ್ಯಪ್ರದೇಶ ರಾಜ್ಯದ ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸುವ 9 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನುಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಮತ್ತು ಮೀನಾಕ್ಷಿ ನಟರಾಜನ್ ಅವರಿಗೆ ಟಿಕೇಟ್ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.