ಡೆಹ್ರಾಡೂನ್ (ಪಿಟಿಐ): ಬದರೀನಾಥ ತೀರ್ಥಯಾತ್ರೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಸಲುವಾಗಿ ಭೂಕುಸಿತ ಪೀಡಿತ ಜೋಶಿಮಠದಲ್ಲಿ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ ಸ್ಥಾಪಿಸಲಾಗುವುದು ಮತ್ತು ಗಡಿ ರಸ್ತೆಗಳ ಸಂಘಟನೆಯ (ಬಿಆರ್‌ಒ) ತಂಡವನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಚಾರ್‌ಧಾಮ್ ಯಾತ್ರೆಗೆ ಪೂರ್ವಸಿದ್ಧತೆ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಬಿಆರ್‌ಒ ಹಾನಿಗೊಳಗಾಗುವ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಲಿದೆ ಎಂದು ಮುಖ್ಯಮಂತ್ರಿ ಧಾಮಿ ತಿಳಿಸಿದ್ದಾರೆ. ರಸ್ತೆಗಳು ಶೇ 100ರಷ್ಟು ಗುಂಡಿ ಮುಕ್ತವಾಗಿರಬೇಕು ಎಂದು ಲೋಕೋಪಯೋಗಿ ಇಲಾಖೆಗೆ ಅವರು ಸೂಚಿಸಿದ್ದಾರೆ.

ಬದರೀನಾಥ, ಹೇಮಕುಂಡ ಸಾಹಿಬ್ ಮತ್ತು ಅಂತರರಾಷ್ಟ್ರೀಯ ಸ್ಕೀಯಿಂಗ್ ತಾಣ ಔಲಿಗೆ ತೆರಳಲು ಜೋಶಿಮಠವೇ ಹೆಬ್ಬಾಗಿಲು. ಆದರೆ ಕಟ್ಟಡಗಳು, ರಸ್ತೆಗಳು ಮತ್ತು ಸಾರ್ವಜನಿಕ ಸೌಲಭ್ಯಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಏಪ್ರಿಲ್ 27ರಂದು ಬದರೀನಾಥ ಯಾತ್ರೆ ಪ್ರಾರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.