ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಚರ್ಚೆ

Published 3 ಜುಲೈ 2024, 16:18 IST
Last Updated 3 ಜುಲೈ 2024, 16:18 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿಶಾಖಪಟ್ಟಣ ಉಕ್ಕು ಕಾರ್ಖಾನೆಯ ಪ್ರಗತಿ ಪರಿಶೀಲನೆ ನಡೆಸಿದರು.

ಉಕ್ಕು ಸಚಿವಾಲಯದ ವ್ಯಾಪ್ತಿಗೆ ಬರುವ ಈ ಕಾರ್ಖಾನೆಯನ್ನು ಲಾಭದಾಯಕವಾಗಿ ಮುನ್ನಡೆಸುವ ಹಾಗೂ ಆರ್ಥಿಕವಾಗಿ ಕಂಪನಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಉನ್ನತ ಅಧಿಕಾರಿಗಳು ಹಾಗೂ ಕಂಪನಿಯ ಉನ್ನತ ಅಧಿಕಾರಿಗಳ ಜತೆಗೆ ಸಚಿವರು ಸಭೆ ನಡೆಸಿದರು.

ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂಸ್ಥೆಯನ್ನು ಮೇಲೆತ್ತುವ ಸಲುವಾಗಿ ಉಕ್ಕು ಉತ್ಪಾದನೆಯನ್ನು ಹೆಚ್ಚಳ ಮಾಡಬೇಕೆಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ; ಕಂಪನಿಯ ಕಾರ್ಯ ಚಟುವಟಿಕೆ, ಆರ್ಥಿಕ ಸ್ಥಿತಿಗತಿ, ಉತ್ಪಾದನೆ, ಹೊಸ ಉಪಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರಿ ನಿಗದಿ ಮಾಡಿದ್ದು; ಈ ಗುರಿ ಮುಟ್ಟುವ ಬಗ್ಗೆ ನಾವು ಅವಿರತವಾಗಿ ಕೆಲಸ ಮಾಡಬೇಕು. ಅದಕ್ಕೆ ಪೂರಕವಾಗಿ ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಉತ್ಪಾದನೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT