ಚೆನ್ನೈ :ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರ ವಿರುದ್ಧ ವೈಯಕ್ತಿಕವಾಗಿ ಅಶ್ಲೀಲವಾಗಿ ನಿಂದನೆ ಮಾಡಿದ ಡಿಎಂಕೆ ಸಂಸದ ಎ. ರಾಜಾ ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಾ ವಿರುದ್ಧ ಎಐಎಡಿಎಂಕೆ ದೂರು ನೀಡಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ (ಸಿಇಒ) ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ರಾಜಾ ವಿರುದ್ಧ ಭಾರತೀಯ ದಂಡ ಸಂಹಿತೆ ಹಾಗೂ ಜನರ ಪ್ರಾತಿನಿಧ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪಳನಿಸ್ವಾಮಿ ವಿರುದ್ಧ ನಿಂದನೆ ಮಾಡಿದ ರಾಜಾ ಅವರನ್ನು ಚುನಾವಣಾ ಪ್ರಚಾರಕ್ಕೆ ಅವಕಾಶ ನೀಡಬಾರದು ಎಂದು ಎಐಎಡಿಎಂಕೆ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.