ನಾಗಪುರ: 41 ವರ್ಷದ ವೈದ್ಯರೊಬ್ಬರು ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಡಾ. ಸುಷ್ಮಾ ರಾಣೆ, ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಪತಿ ಧೀರಜ್ (42) ಮತ್ತು ಅವರ 11 ಮತ್ತು 5 ವರ್ಷದ ಇಬ್ಬರು ಮಕ್ಕಳು ನಾಗಪುರದ ಕೊರಡಿ ಪ್ರದೇಶದಲ್ಲಿರುವ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಧೀರಜ್ ಮತ್ತು ಮಕ್ಕಳ ಮೃತದೇಹಗಳು ಮಾಸ್ಟರ್ ಬೆಡ್ರೂಂನ ಹಾಸಿಗೆಯ ಮೇಲೆ ಪತ್ತೆಯಾಗಿದ್ದರೆ, ವೈದ್ಯರ ಮೃತದೇಹ ಸೀಲಿಂಗ್ ಫ್ಯಾನ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಕೊರಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅವರೊಂದಿಗೆ ವಾಸವಾಗಿದ್ದ ಮೃತನ 60 ವರ್ಷದ ಚಿಕ್ಕಮ್ಮ ಮಲಗುವ ಕೋಣೆಯ ಬಾಗಿಲು ಬಡಿದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಸಾವಿಗೀಡಾಗಿರುವುದು ಬೆಳಕಿಗೆ ಬಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳದಿಂದ ಪೊಲೀಸರು, ಎರಡು ಸಿರಿಂಜ್ ಮತ್ತು ಡೆತ್ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಸುಷ್ಮಾ ಅವರು ಯಾವುದೋ ವಿಚಾರಕ್ಕೆ ಅಸಮಾಧಾನಗೊಂಡಿದ್ದರಿಂದಾಗಿ ಈ ರೀತಿಯ ಹೆಜ್ಜೆಯನ್ನು ಇಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಪ್ರಾಥಮಿಕ ತನಿಖೆಯ ಪ್ರಕಾರ, ಸುಷ್ಮಾ ಅವರು ಮೊದಲಿಗೆ ಪತಿ ಮತ್ತು ಮಕ್ಕಳಿಗೆ ಪ್ರಜ್ಞೆ ತಪ್ಪುವಂತೆ ಮಾಡಲು ಆಹಾರದಲ್ಲಿ ಕೆಲವು ನಿದ್ರಾಜನಕ ಔಷಧವನ್ನು ಬೆರೆಸಿ ನೀಡಿದ್ದಿರಬಹುದು ಮತ್ತು ಬಳಿಕ ಅವರಿಗೆ ಇಂಜೆಕ್ಷನ್ ನೀಡಿರಬಹುದು ಎನ್ನಲಾಗಿದೆ.

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.