ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಲಿನ ಬದಲು ಬಾಲಕನ ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ: ಪೋಷಕರ ಆರೋಪ

Published 29 ಜೂನ್ 2024, 14:12 IST
Last Updated 29 ಜೂನ್ 2024, 14:12 IST
ಅಕ್ಷರ ಗಾತ್ರ

ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಶಹಾಪುರದ ಒಂಬತ್ತು ವರ್ಷದ ಬಾಲಕನಿಗೆ ಸರ್ಕಾರಿ ಆಸ್ಪತ್ರೆ ವೈದ್ಯರು ಕಾಲಿನ ಗಾಯಕ್ಕೆ ಬದಲಾಗಿ ಆತನ ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. 

‘ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಾಲಿಗೆ ಗಾಯವಾಗಿತ್ತು. ಜೂನ್‌ 15ರಂದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಇತ್ತೀಚೆಗೆ ಆತನ ಕಾಲಿನ ಬದಲಾಗಿ ಮರ್ಮಾಂಗಕ್ಕೆ ‘ಸುನ್ನತಿ’ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವೈದ್ಯರಿಗೆ ತಮ್ಮ ತಪ್ಪು ಅರಿವಿಗೆ ಬಂದ ನಂತರ ಗಾಯಗೊಂಡಿದ್ದ ಕಾಲಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ’ ಎಂದು ಬಾಲಕನ ಪೋಷಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕನ ಪೋಷಕರು ಶಹಾಪುರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದು, ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದಾಗ್ಯೂ ಬಾಲಕನ ಪೋಷಕರ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪದ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಜಿಲ್ಲಾ ಸರ್ಜನ್‌ ಡಾ. ಕೈಲಾಸ್‌ ಪವಾರ್‌ ಹೇಳಿದ್ದಾರೆ.

‘ಬಾಲಕನು ಕಾಲಿನ ಗಾಯದ ಹೊರತಾಗಿ ಫೀಮೊಸಿಸ್‌ ತೊಂದರೆಯಿಂದ ಕೂಡ ಬಳಲುತ್ತಿದ್ದ. ಹಾಗಾಗಿ ನಾವು ಎರಡೂ ಶಸ್ತ್ರಚಿಕಿತ್ಸೆ ಮಾಡಿದ್ದೇವೆ’ ಎಂದು ಆಸ್ಪತ್ರೆಯ ಆರೋಗ್ಯ ಅಧಿಕಾರಿ ಗಜೇಂದ್ರ ಪವಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT