ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಆಗಸ್ಟ್ 21ರಿಂದ ಐದು ದಿನಗಳ ಕಾಲ ನಗರದ ಶ್ಯಾಂಬಜಾರ್ ಮೆಟ್ರೊ ನಿಲ್ದಾಣದ ಬಳಿ ಧರಣಿ ನಡೆಸಲು ಪಶ್ಚಿಮ ಬಂಗಾಳ ಬಿಜೆಪಿ ಘಟಕಕ್ಕೆ ಕಲ್ಕತ್ತ ಹೈಕೋರ್ಟ್ ಅನುಮತಿ ನೀಡಿದೆ.

ಐದು ದಿನಗಳ ಕಾಲ ಧರಣಿ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಪ್ರತಿಪಾದಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಕೇವಲ ಒಂದು ದಿನ ಮಾತ್ರ ಧರಣಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

ಬುಧವಾರದಿಂದ ಆರು ದಿನಗಳ ಕಾಲ ಧರಣಿ ನಡೆಸಲು ಅನುಮತಿ ನೀಡುವಂತೆ ಬಿಜೆಪಿ ಪರ ವಕೀಲರು ಮನವಿ ಮಾಡಿದರು.

ಎರಡು ಕಡೆಗಳ ವಾದಗಳನ್ನು ಆಲಿಸಿದ ನಂತರ, ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರು ಐದು ದಿನಗಳ ಕಾಲ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ಅರ್ಧ ಕಿ.ಮೀ ದೂರದಲ್ಲಿರುವ ನಿಗದಿತ ಸ್ಥಳದಲ್ಲಿ ಬಿಜೆಪಿಗೆ ಧರಣಿ ನಡೆಸಲು ಅವಕಾಶ ನೀಡಿದರು.

ಬುಧವಾರದಿಂದ ಭಾನುವಾರದವರೆಗೆ ಪ್ರತಿದಿನ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ 300 ಜನರು ಮೀರದಂತೆ ಧರಣಿ ನಡೆಸಲು ನ್ಯಾಯಾಲಯವು ಅನುಮತಿ ನೀಡಿದೆ.

ಆಗಸ್ಟ್ 9ರಂದು ಆರ್.ಜಿ.ಕರ್ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಘಟನೆಯ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಸಂತ್ರಸ್ತರಿಗೆ ನ್ಯಾಯ ಹಾಗೂ ಆಸ್ಪತ್ರೆಗಳಲ್ಲಿ ಹೆಚ್ಚಿನ ಭದ್ರತೆಗಾಗಿ ಸೂಕ್ತ ಕಾನೂನು ಜಾರಿಗೊಳಿಸುವಂತೆ ಕೋರಿ ದೇಶದಾದ್ಯಂತ ವೈದ್ಯಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
.ವಿದ್ಯಾರ್ಥಿನಿ ಹತ್ಯೆ: ವ್ಯವಸ್ಥೆಯ ವೈಫಲ್ಯ ವೈದ್ಯರ ಸುರಕ್ಷತೆಗೆ ಸವಾಲಾಗಿದೆ: SC.ಕೋಲ್ಕತ್ತದ ಆರ್.ಜಿ.ಕರ್ ಆಸ್ಪತ್ರೆ ಹಣಕಾಸು ಚಟುವಟಿಕೆ ಕುರಿತು ಎಸ್ಐಟಿ ತನಿಖೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.