ಗ್ವಾಲಿಯರ್: ಇತ್ತೀಚೆಗೆ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಮತ್ತು ಪರಾಭವಗೊಂಡಿರುವ ನಿರ್ಗಮಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಭಾರತದ ಮೇಲೆಯೇ ಅವಲಂಬಿತರಾಗಿದ್ದರು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವದ ಎಲ್ಲಾ ದೊಡ್ಡ ರಾಷ್ಟ್ರಗಳು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿರಲು ಬಯಸುತ್ತವೆ’ ಎಂದು ಹೇಳಿದ್ದಾರೆ.

‘ನಮ್ಮ ಪ್ರಧಾನಿ ಮೋದಿ ಅವರು ಅದೃಷ್ಟದ ಸಂಕೇತವಿದ್ದಂತೆ. ಭಾರತವೂ ತನ್ನ ಪ್ರಜಾಪ್ರಭುತ್ವದ ಶಕ್ತಿಯನ್ನು ಜಗತ್ತಿಗೆ ತೋರಿಸಿದೆ. ಇಂದು ವಿಶ್ವದ ಯಾವುದೇ ದೊಡ್ಡ ರಾಷ್ಟ್ರಗಳು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿರಲು ಬಯಸುತ್ತವೆ. ಈಚೆಗೆ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯೇ ಇದಕ್ಕೆ ಉತ್ತಮ ಉದಾಹರಣೆ. ಡೊನಾಲ್ಡ್ ಟ್ರಂಪ್ ಅಥವಾ ಕಮಲಾ ಹ್ಯಾರಿಸ್ ಅವರು ನಮ್ಮ ದೇಶದ ಮೇಲೆ ಅವಲಂಬಿತರಾಗಿದ್ದರು, ಜತೆಗೆ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕೂಡ ಮೋದಿಯವರ ಉತ್ತಮ ಸ್ನೇಹಿತರಾಗಿದ್ದಾರೆ’ ಎಂದು ಯಾದವ್ ಹೇಳಿದರು.

ಭಾರತದಲ್ಲಿ ಮೋದಿಯವರ ಜನಪ್ರಿಯತೆಯ ಆಳವನ್ನು ಅಳೆಯಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪರಿಣಾಮವಾಗಿ ಅವರು 60 ವರ್ಷಗಳ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಜತೆಗೆ, ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.