ಮುಂಬೈ: ದಲಿತ ಚಿಂತಕ ಆನಂದ್ ತೇಲ್ತುಂಬ್ಡೆ ಅವರನ್ನು ಫೆಬ್ರುವರಿ 12ರ ಮಧ್ಯರಾತ್ರಿವರೆಗೆ ಬಂಧಿಸುವುದಿಲ್ಲ ಎಂದು ಪುಣೆ ಪೊಲೀಸರು ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದಾರೆ.

ಕೋರೆಗಾಂವ್–ಭೀಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ತೇಲ್ತುಂಬ್ಡೆ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಈ ಹೇಳಿಕೆ ನೀಡಿದ್ದಾರೆ.

2018ರ ಜನವರಿ 1ರಂದು ಕೋರೆಗಾಂವ್–ಭೀಮಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೇಲ್ತುಂಬ್ಡೆ ವಿರುದ್ಧವೂ ಆರೋಪ ಹೊರಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನ್ಯಾಯಮೂರ್ತಿ ಎನ್.ಡಬ್ಲ್ಯು. ಸಾಂಬ್ರೆ ಅವರ ಪೀಠ ಈ ಪ್ರಕರಣದ ವಿಚಾರಣೆಯನ್ನು ಫೆ.11ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.