ಐಜ್ವಾಲ್: ಮಿಜೋರಾಂನಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸುಮಾರು ₹68.41 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.

ಮಾದಕ ವಸ್ತುವಿನ ಬಗ್ಗೆ ಸಿಕ್ಕ ಸುಳಿವಿನ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಸಿಯಾಹಾ ಜಿಲ್ಲೆಯ ಬುವಲ್ಪುಯಿ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಸುಮಾರು ₹1.75 ಕೋಟಿ ಮೌಲ್ಯದ 225 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಅಸ್ಸಾಂ ರೈಫಲ್ಸ್ ಹೇಳಿದೆ.

ಗುರುವಾರ ಚಂಫೈ ಜಿಲ್ಲೆಯಲ್ಲಿ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಸುಮಾರು ₹66.66 ಕೋಟಿ ಮೌಲ್ಯದ 22.2 ಕೆ.ಜಿ ತೂಕದ ಮೆಥಾಂಫೆಟಮೈನ್ ಮಾತ್ರೆಗಳನ್ನು ಒಳಗೊಂಡ 20 ಪೊಟ್ಟಣಗಳನ್ನು ವಶಪಡಿಸಿಕೊಳ್ಳಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಾದಕ ವಸ್ತುಗಳನ್ನು ಕಾನೂನು ಪ್ರಕ್ರಿಯೆಗಾಗಿ ಅಬಕಾರಿ ಮತ್ತು ಮಾದಕ ದ್ರವ್ಯ ಇಲಾಖೆಗೆ ಕಳುಹಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.