ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ 9 ವಿಮಾನಗಳು ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ನಿವಾಸಿಗಳು ಮನೆಯೊಳಗೆ ಇರಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಹಾಗೂ ಮಳೆ ಬೀಳುವ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲದಿರುವಂತೆ ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಂಚಾರ ಪೊಲೀಸರು, ನಗರದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ವಿವಿಧೆಡೆ ಮರಗಳು ಉರುಳಿ ಬಿದ್ದಿರುವ ಬಗ್ಗೆ ವರದಿಯಾಗಿದೆ. ಆದ್ದರಿಂದ, ಟ್ರಾಫಿಕ್ ಸಮಸ್ಯೆ ನಿವಾರಿಸಲು ಬದಲಿ ಮಾರ್ಗದಲ್ಲಿ ಚಲಿಸುವಂತೆ ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ದೆಹಲಿಯ ಹಲವೆಡೆ ಇಂದು ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಸಹಿತ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
.ದೆಹಲಿಯಲ್ಲಿ ಭಾರಿ ಮಳೆ: ಧರೆಗುರುಳಿದ ಮರಗಳು, ಇಬ್ಬರು ಸಾವು –ಹಲವರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.