ಲಡಾಖ್: ಪೂರ್ವ ಲಡಾಖ್‌ನ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಭಾರತ ಮತ್ತು ಚೀನಾ ನಡುವೆ ಭಾನುವಾರ 16ನೇ ಸುತ್ತಿನ ಉನ್ನತ ಮಟ್ಟದ ಮಿಲಿಟರಿ ಮಾತುಕತೆ ಆರಂಭವಾಗಿದೆ.

ಭಾರತದ ಭಾಗದಲ್ಲಿರುವ ಚುಶುಲ್ ಮೊಲ್ಡೊ ಎಂಬಲ್ಲಿ ಸಭೆ ನಿಗದಿಯಾಗಿದ್ದು, ಮಾತುಕತೆಗಳು ಆರಂಭವಾಗಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಹಿಂದೆ ಮಾರ್ಚ್ 11 ರಂದು ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ನಡುವೆ ಸಭೆ ನಡೆದಿತ್ತು.

ಹೊಸ ಮಾತುಕತೆಯಲ್ಲಿ, ಡೆಪ್ಸಾಂಗ್ ಮತ್ತು ಡೆಮ್‌ಚೋಕ್‌ನಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅಗ್ರಹಿಸುವುದರ ಜೊತೆಗೆ ಎಲ್ಲಾ ಘರ್ಷಣಾತ್ಮಕ ಸ್ಥಳಗಳಲ್ಲಿ ಸಾಧ್ಯವಾದಷ್ಟು ಬೇಗ ಸೈನ್ಯವನ್ನು ಹಿಂತೆಗೆದುಕೊಳ್ಳಬೇಕು ಎಂದು ಭಾರತೀಯ ಸೇನೆಯ ಅಧಿಕಾರಿಗಳು ಚೀನಾವನ್ನು ಒತ್ತಾಯಿಸಲಿದ್ದಾರೆ ಎಂದು ಹೇಳಲಾಗಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ಜುಲೈ 7 ರಂದು ಬಾಲಿಯಲ್ಲಿ ನಡೆದ ಮಾತುಕತೆಯ ವೇಳೆ ಪೂರ್ವ ಲಡಾಖ್‌ನ ಪರಿಸ್ಥಿತಿಯು ಪ್ರಮುಖವಾಗಿ ಚರ್ಚೆಯಾಗಿತ್ತು.

ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಒಂದು ಗಂಟೆಯ ಈ ಸಭೆಯಲ್ಲಿ, ಪೂರ್ವ ಲಡಾಖ್‌ನಲ್ಲಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳ ಶೀಘ್ರ ಪರಿಹಾರದ ಅಗತ್ಯವನ್ನು ಜೈಶಂಕರ್ ವಾಂಗ್‌ಗೆ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.