ಚೆನ್ನೈ: ‘ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಪಕ್ಷದ ಕ್ರಮಕ್ಕೆ ಚುನಾವಣಾ ಆಯೋಗ ಸಮ್ಮತಿ ಸೂಚಿಸಿದೆ’ ಎಂದು ತಮಿಳುನಾಡಿನ ಎಐಎಡಿಎಂಕೆ ಗುರುವಾರ ಹೇಳಿದೆ.

‘ಪಕ್ಷದ ಬೈಲಾದಲ್ಲಿ ಹಲವು ತಿದ್ದುಪಡಿಗಳನ್ನು ಮಾಡಲಾಗಿತ್ತು. ಜೊತೆಗೆ ಆಡಳಿತ ಮಂಡಳಿಗೆ ಹೊಸ ಸದಸ್ಯರನ್ನು ನೇಮಿಸಲಾಗಿತ್ತು. ಇದಕ್ಕೆ ಆಯೋಗ ಅನುಮೋದನೆ ನೀಡಿದೆ’ ಎಂದು ಪಕ್ಷದ ವಕ್ತಾರ ಆರ್.ಎಂ.ಬಾಬು ಮುರುಗವೇಲ್ ಟ್ವೀಟ್ ಮಾಡಿದ್ದಾರೆ.

ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಹಾಗೂ ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದನ್ನು ಒ.ಪನ್ನೀರಸೆಲ್ವಂ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಮದ್ರಾಸ್ ಹೈಕೋರ್ಟ್ನ ವಿಭಾಗೀಯ ಪೀಠವು ಗುರುವಾರ ಇದರ ವಿಚಾರಣೆ ನಡೆಸಿದೆ. ಇದೇ ಸಮಯದಲ್ಲಿ ಆಯೋಗವು ಪಳನಿಸ್ವಾಮಿ ಬಣದ ಮನವಿಯನ್ನು ಪುರಸ್ಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.