ನವದೆಹಲಿ: ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ₹ 3,600 ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯವು (ಇ.ಡಿ) ಉದ್ಯಮಿ ಅನೂಪ್ಕುಮಾರ್ ಗುಪ್ತಾ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅನೂಪ್ಕುಮಾರ್ ಅವರು ಇಂಡಿಯಾ ಗೇಟ್’ ಬ್ರ್ಯಾಂಡ್ನ ಬಾಸಮತಿ ಅಕ್ಕಿ ಮಾರಾಟ ಮಾಡುವ ಕೆಆರ್ಬಿಎಲ್ ಲಿ. ಕಂಪನಿಯ ನಿರ್ದೇಶಕರಾಗಿದ್ದಾರೆ. ‘ಗುಪ್ತಾ ಅವರನ್ನು ಇಲ್ಲಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗಸ್ಟಾವೆಸ್ಟ್ಲ್ಯಾಂಡ್ ಕಂಪನಿಯಿಂದ ವಿವಿಐಪಿ ಹೆಲಿಕಾಪ್ಟರ್ಗಳ ಖರೀದಿ ಹಗರಣಕ್ಕೆ ಸಂಬಂಧಿಸಿ ಗುಪ್ತಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.

‘ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಹೊಸದಾಗಿ ಸಾಕ್ಷ್ಯಗಳು ಸಿಕ್ಕಿರುವ ಕಾರಣ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸುವುದು ಅಗತ್ಯವಾಗಿತ್ತು’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.