ನವದೆಹಲಿ: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು ₹752 ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ತಿಳಿಸಿದೆ.

PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.

ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.

ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.

ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.

ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.

ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.