ಹೈದರಾಬಾದ್: ಆಂಧ್ರಪ್ರದೇಶ ರಾಜ್ಯ ಕೌಶಲ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ₹23.54 ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ–2002ರ ಅಡಿಯಲ್ಲಿ ಜಪ್ತಿ ಮಾಡಿದೆ.

ಸೈಮೆನ್ಸ್ ಯೋಜನೆ ಅಡಿಯಲ್ಲಿ ಆಂಧ್ರಪ್ರದೇಶ ಸರ್ಕಾರಕ್ಕೆ ವಂಚನೆ ಮಾಡಿದ ಆರೋಪದ ಮೇಲೆ ಡಿಸೈನ್ಟೆಕ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ (ಡಿಟಿಎಸ್ಪಿಎಲ್) ಮತ್ತಿತರರ ವಿರುದ್ಧ ಸಿಐಡಿ ಎಫ್ಐಆರ್ ದಾಖಲು ಮಾಡಿತ್ತು. ಇದರ ಅನ್ವಯ ಇ.ಡಿ ತನಿಖೆ ಆರಂಭಿಸಿತ್ತು. ಪ್ರಕರಣದಲ್ಲಿ ಈಗಿನ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

ಪ್ರಕರಣ ಸಂಬಂಧ ವಿಕಾಸ್ ವಿನಾಯಕ ಖನ್ವೇಲ್ಕರ್, ಸುಮನ್ ಬೋಸ್, ಮುಕುಲ್ ಚಂದ್ರ ಅಗರ್ವಾಲ್, ಸುರೇಶ್ ಗೋಯಲ್ ಅವರನ್ನು ಬಂಧಿಸಿದೆ.

ಇ.ಡಿ ಇದಕ್ಕೂ ಮುನ್ನ, ಡಿಟಿಎಸ್ಪಿಎಲ್ನ ₹31.20 ಕೋಟಿ ನಿಗದಿತ ಠೇವಣಿಯನ್ನು ಜಪ್ತಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.