ನವದೆಹಲಿ: ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಆಪ್ತರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ತಮಿಳುನಾಡಿನ 10 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ಮಾಹಿತಿ ಸಿಕ್ಕಿದೆ.

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 14ರಂದು ಇ.ಡಿ ಅಧಿಕಾರಿಗಳು ಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೆಂಥಿಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿದೆ.

ಇ.ಡಿ ದೋಷಾರೋಪಪಟ್ಟಿಯ ಒಂದು ಕಾಪಿಯನ್ನೂ ನ್ಯಾಯಾಲಯವು ಸೆಂಥಿಲ್ ಅವರಿಗೆ ಹಸ್ತಾಂತರಿಸಿದೆ.

ಕೊಯಮತ್ತೂರು, ತಿರುಚಿ ಮತ್ತು ಕರೂರ್‌ನಲ್ಲಿರುವ ಸೆಂಥಿಲ್ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ.

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಹಾಗೂ ಹಿರಿಯ ಡಿಎಂಕೆ ನಾಯಕ ಕೆ.ಪೊನ್ಮುಡಿ ಅವರ ಮನೆ ಮೇಲೂ ಇ.ಡಿ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.