ಮುಂಬೈ: ಮುಂಬೈನ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್ ರಾವುತ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ವಶಕ್ಕೆ ಪಡೆದಿರುವ ಬೆನ್ನಲ್ಲೇ ಅವರ ನಿವಾಸದಿಂದ ಇ.ಡಿ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮೂಲಗಳ ಪ್ರಕಾರ ₹11.50 ಲಕ್ಷ ರೂಪಾಯಿ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

₹1,034 ಕೋಟಿ ಮೊತ್ತದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಳಿಗ್ಗೆಯೇ ರಾವುತ್ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಲವು ಗಂಟೆಗಳ ಕಾಲ ಶೋಧ ನಡೆಸಿದ ಬಳಿಕ ರಾವುತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಕೂಡ ವಿಚಾರಣೆ ಮುಂದುವರೆದಿದೆ.

ಇ.ಡಿ ಅಧಿಕಾರಿಗ ನಡೆ ಖಂಡಿಸಿ ಮುಂಬೈನಲ್ಲಿ ಶಿವಸೇನಾದ ಕಾರ್ಯಕರ್ತರು ಪ್ರತಿಭಟನೆ ಕೂಡ ನಡೆಸಿದ್ದಾರೆ. ಇದೊಂದು ರಾಜಕೀಯ ಎಂದು ಸಂಜಯ್ ರಾವುತ್ ಆರೋಪಿಸಿದ್ದಾರೆ.

ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು.

ಇ.ಡಿ ಸೂಚಿಸಿದ ದಿನಾಂಕದಂದು ರಾಜ್ಯಸಭಾ ಸಂಸದರಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ರಾವುತ್ ಪರವಾಗಿ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಇ.ಡಿ ಅಧಿಕಾರಿಗಳನ್ನು ಭೇಟಿಯಾದ ವಕೀಲರು ಈ ವಿಷಯ ತಿಳಿಸಿದ್ದು, ಆಗಸ್ಟ್ ಮೊದಲ ವಾರದ ಬಳಿಕ ಸಮಯ ನೀಡುವಂತೆ ವಿನಂತಿಸಿದ್ದರು.

ವಿಡಿಯೊದಲ್ಲಿ ಸೆರೆಯಾಯಿತು ಅಪರೂಪದಲ್ಲೇ ಅಪರೂಪವಾದ ಬ್ಯ್ಲಾಕ್ ಟೈಗರ್!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.