ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಣ ಅಕ್ರಮ ವರ್ಗಾವಣೆ: ಮಾಜಿ ಕ್ರಿಕೆಟಿಗ ಅಜರುದ್ದೀನ್‌ಗೆ ಇ.ಡಿ ಸಮನ್ಸ್

Published : 3 ಅಕ್ಟೋಬರ್ 2024, 6:53 IST
Last Updated : 3 ಅಕ್ಟೋಬರ್ 2024, 6:53 IST
ಫಾಲೋ ಮಾಡಿ
Comments

ಹೈದರಾಬಾದ್‌: ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಸಂಬಂಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಅಜರುದ್ದೀನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

61 ವರ್ಷದ ಅಜರುದ್ದೀನ್ ಅವರನ್ನು ಅಕ್ಟೋಬರ್‌ 3ರಂದು ಹೈದರಾಬಾದ್‌ನಲ್ಲಿರುವ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಪ್ರಕರಣ ಸಂಬಂಧ ಕಳೆದ ವರ್ಷ ನವೆಂಬರ್‌ನಲ್ಲಿ ಇ.ಡಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿತ್ತು.

ಹೈದರಾಬಾದ್‌ ಕ್ರಿಕೆಟ್ ಅಸೋಶಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ₹ 20 ಕೋಟಿ ಹಣಕಾಸಿನ ಅವ್ಯವಹಾರದ ಕುರಿತು ತೆಲಂಗಾಣದ ಎಸಿಬಿ ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಇ.ಡಿ ಪ್ರಕರಣ ದಾಖಲು ಮಾಡಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT