ನವದೆಹಲಿ: ಜಲಸಂಪನ್ಮೂಲಗಳ ಸಮರ್ಥ ನಿರ್ವಹಣೆಯು ನೀರಿನ ಲಭ್ಯತೆಯ ಜೊತೆಗೆ ಆರ್ಥಿಕ ಬೆಳವಣಿಗೆಯಲ್ಲೂ ಮಹತ್ವದ ಪಾತ್ರವಹಿಸುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ಸೆಂಟ್ರಲ್ ವಾಟರ್ ಎಂಜಿನಿಯರಿಂಗ್ ಸರ್ವಿಸ್‌ನ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರೀಕರಣ ಮತ್ತು ಅಭಿವೃದ್ಧಿಗೆ ಲಭ್ಯವಿರುವ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವ ಅಗತ್ಯ ಇದೆ ಎಂದಿದ್ದಾರೆ.

ಜಲಸಂಪನ್ಮೂಲಗಳ ನಿರ್ವಹಣೆಯು ಎಲ್ಲಾ ತಲೆಮಾರುಗಳಿಗೂ ಪ್ರಮುಖ ಮತ್ತು ಸವಾಲಿನ ಕೆಲಸವಾಗಿದೆ ಎಂದ ಅವರು ಈ ನಿಟ್ಟಿನಲ್ಲಿ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

ಹವಾಮಾನ ವೈಪರೀತ್ಯವು ಜಲಸಂಪನ್ಮೂಲಗಳ ಮೇಲೆ ಪರಿಣಾಮ ಬೀರಲು ಆರಂಭಿಸಿದೆ ಎಂದೂ ಅವರು ಕಳವಳ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.