ಮುಂಬೈ: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ (2023–24) ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ, ಬಾಳೆಹಣ್ಣು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಅಕ್ಕಿ ಮತ್ತು ಬೇಳೆಯಿಂದ ತಯಾರಿಸಿದ ಕಿಚಡಿ ಜೊತೆಗೆ, ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ (ಬುಧವಾರ ಅಥವಾ ಶುಕ್ರವಾರ) ಬೇಯಿಸಿದ ಮೊಟ್ಟೆ ಅಥವಾ ’ಎಗ್ ಪಲಾವ್‘ ಅಥವಾ 'ಎಗ್ ಬಿರಿಯಾನಿ' ನೀಡಲಾಗುವುದು. ಸಸ್ಯಹಾರಿ ವಿದ್ಯಾರ್ಥಿಗಳಿಗೆ ಆ ದಿನ ಬಾಳೆಹಣ್ಣು ಅಥವಾ ಇನ್ಯಾವುದೇ ಬೇರೆ ಹಣ್ಣು ನೀಡಲಾಗುವುದು ಎಂದು ಮಂಗಳವಾರ ಹೊರಡಿಸಲಾದ ಸುತ್ತೋಲೆಯಲ್ಲಿ (ಜಿಆರ್) ತಿಳಿಸಿದೆ.

ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಮೊಟ್ಟೆಗಳನ್ನು ಸೇರಿಸಲಾಗುವುದು. ನಿಯಮಿತ ಪೋಷಣೆಯ ಹೊರತಾಗಿ, ವಾರಕ್ಕೊಮ್ಮೆ ಮೊಟ್ಟೆಗಳನ್ನು 23 ವಾರ ನೀಡಲಾಗುವುದು ಎಂದಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 1ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.