ನವದೆಹಲಿ: ಈದ್ ಹಬ್ಬದ ಪ್ರಯುಕ್ತದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಭಾಶಯ ಕೋರಿದ್ದಾರೆ.

ಈದ್ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಈ ವಿಶೇಷ ಸಂದರ್ಭವು ಸಹಾನುಭೂತಿ, ಸಹೋದರತ್ವ ಮತ್ತು ಸಾಮರಸ್ಯದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿ ಹೊಂದುವಂತಾಗಲಿ' ಎಂದಿದ್ದಾರೆ.

ಇದೇ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಯೊಬ್ಬರಿಗೂ ಈದ್ ಮುಬಾರಕ್ ಎಂದು ಟ್ವೀಟ್ ಮಾಡಿದ್ದಾರೆ.

ಈದ್-ಉಲ್-ಫಿತ್ರ್ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು ಎಂದು ಟ್ವೀಟಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, 'ಈ ಹಬ್ಬವು ಸಾಮಾಜಿಕ ಸಾಮರಸ್ಯವನ್ನು ಮತ್ತಷ್ಟು ಬಲಪಡಿಸಲಿ ಮತ್ತು ನಮ್ಮ ದೇಶದಲ್ಲಿ ಹೆಚ್ಚು ಶಾಂತಿ ಮತ್ತು ನೆಮ್ಮದಿ ತರಲಿ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.