ಉದಕಮಂಡಲಂ: ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಪ್ರವಾಸಿಗರು ಮೃತಪಟ್ಟು 42 ಜನ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ.

ಮೃತರಲ್ಲಿ ಬಹುತೇಕರು ತಮಿಳುನಾಡಿನ ತೆಂಕಾಸಿಯ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೂನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿದ್ದ ಬಸ್, 9 ನೇ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು 50 ಅಡಿ ಆಳವಾದ ಕಣಿವೆಗೆ ಉರುಳಿ ಬಿದ್ದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಬಸ್ನಲ್ಲಿ 57 ಪ್ರವಾಸಿಗರು ಇದ್ದರು, ಇವರೆಲ್ಲ ಮೆಟ್ಟುಪಾಳ್ಯಂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಿಕೊಂಡು ವಾಪಸ್ ಊಟಿಗೆ ಬರುವಾಗ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ನ ಬ್ರೇಕ್ ಫೇಲಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಸಂತಾಪ ಸೂಚಿಸಿ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.