ಥಾಣೆ: ಮಹಾರಾಷ್ಟ್ರದ ಮುಖ್ಯಮಂತ್ರಿಯೂ ಆಗಿರುವ ಶಿವಸೇನಾ ಮುಖಂಡ ಏಕನಾಥ ಶಿಂದೆ ಅವರು ಕೊಪ್ರಿ-ಪಚ್ಪಖಾಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಇಂದು (ಸೋಮವಾರ) ನಾಮಪತ್ರ ಸಲ್ಲಿಸಿದ್ದಾರೆ.

ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದೆ.

ಶಿಂದೆ ಅವರು ಶಿವಸೇನಾ (ಯುಬಿಟಿ) ಬಣದ ಕೇದಾರ್ ದಿಘೆ ಅವರನ್ನು ಎದುರಿಸಲಿದ್ದಾರೆ.
.ಯೂನಿಯನ್ ಬ್ಯಾಂಕ್ಗೆ ₹4 ಸಾವಿರ ಕೋಟಿ ವಂಚನೆ: ₹503 ಕೋಟಿ ಆಸ್ತಿ ಜಪ್ತಿ ಮಾಡಿದ ED.23 ವರ್ಷದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ; 75 ವರ್ಷದ ವ್ಯಕ್ತಿ ವಿರುದ್ಧ FIR.
ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ರಾಜಕೀಯ ಮಾರ್ಗದರ್ಶಕ ಆನಂದ್ ದಿಘೆ ಅವರಿಗೆ ಶಿಂದೆ ಪುಷ್ಟ ನಮನ ಸಲ್ಲಿಸಿದರು. ಬಳಿಕ ಬೃಹತ್ ರೋಡ್ ಶೋ ನಡೆಸಿದರು. ಈ ರ್ಯಾಲಿ ಪಕ್ಷದ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಯಿತು.

ಶಿಂಧೆ ಅವರು 2009ರಿಂದ ಕೊಪ್ರಿ-ಪಚ್ಪಖಾಡಿ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬೀಗಿದ್ದಾರೆ.

288 ಸದಸ್ಯ ಬಲದ 'ಮಹಾ' ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಬರಲಿದೆ.

ಸದ್ಯ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ, ಬಿಜೆಪಿ ಹಾಗೂ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು ಒಳಗೊಂಡ 'ಮಹಾಯುತಿ' ಸರ್ಕಾರ ಅಸ್ತಿತ್ವದಲ್ಲಿದೆ.
.Video | ಹೈದರಾಬಾದ್: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮಹಿಳೆಗೆ ಗಂಭೀರ ಗಾಯ.ರೊನಾಲ್ಡೊ ಭೇಟಿಗಾಗಿ 6 ದೇಶ ದಾಟಿ, 13,000 ಕಿ.ಮೀ. ಸೈಕಲ್ ಸವಾರಿ ಮಾಡಿದ ಅಭಿಮಾನಿ!.
ಕಾಂಗ್ರೆಸ್ ಪಕ್ಷವು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ 'ಮಹಾ ವಿಕಾಸ ಆಘಾಡಿ' (ಎಂವಿಎ) ಮೈತ್ರಿಕೂಟದಲ್ಲಿದೆ. ಮೂರೂ ಪಕ್ಷಗಳು ತಲಾ 85 ಕ್ಷೇತ್ರಗಳನ್ನು ಹಂಚಿಕೊಂಡಿದ್ದು, ಉಳಿದ 18 ಸ್ಥಾನಗಳನ್ನು ಮೈತ್ರಿಯ ಭಾಗವಾಗಿರುವ ಇತರ ಪಕ್ಷಗಳಿಗೆ ಬಿಟ್ಟುಕೊಟ್ಟಿವೆ.

ಬಿಜೆಪಿ 4ನೇ ಪಟ್ಟಿ ಬಿಡುಗಡೆ

ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ 3ನೇ ಪಟ್ಟಿ ಬಿಡುಗಡೆ ಮಾಡಿದೆ. ನಾಲ್ವರು ಮಹಿಳಾ ಅಭ್ಯರ್ಥಿಗಳನ್ನು ಸೇರಿದಂತೆ ಒಟ್ಟು 25 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.