ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನರೇಂದ್ರ ಮೋದಿ ಭ್ರಷ್ಟರ ನಾಯಕ ಎಂದ ನಾನಾ ಪಟೋಲೆ: ಏಕನಾಥ ಶಿಂದೆ ಹೇಳಿದ್ದೇನು?

Published : 7 ಜುಲೈ 2024, 13:19 IST
Last Updated : 7 ಜುಲೈ 2024, 13:19 IST
ಫಾಲೋ ಮಾಡಿ
Comments

ನಾಗ್ಪುರ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್‌ಡಿಎ) ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾಗ್ಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2004ರಿಂದ 2014ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ದೇಶದ ಜನರಿಗೆ ಅರಿವಿದೆ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಕಾಂಗ್ರೆಸ್‌ ಆಡಳಿತದಲ್ಲಿ ನಡೆದಿದ್ದ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ, ಕಾಮನ್‌ವೆಲ್ತ್ ಕ್ರೀಡಾಕೂಟ (ಸಿಡಬ್ಲುಜಿ) ಹಗರಣ, ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಗಳನ್ನು ನೋಡಿದ್ದೇವೆ. ಜತೆಗೆ ಕಮಿಷನ್ ಮತ್ತು ಭ್ರಷ್ಟಾಚಾರ ಆರೋಪಗಳನ್ನು ವ್ಯಾಪಕವಾಗಿ ಕೇಳಿದ್ದೇವೆ’ ಎಂದು ಶಿಂದೆ ಗುಡುಗಿದ್ದಾರೆ.

ಜುಲೈ 12ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ 11 ಸ್ಥಾನಗಳ ಪೈಕಿ ಒಂಬತ್ತು ಸ್ಥಾನಗಳನ್ನು ಮಹಾಯುತಿ (ಎನ್‌ಡಿಎ) ಗೆಲ್ಲಲಿದೆ ಎಂದು ಶಿಂದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟರ ನಾಯಕರಿದ್ದಂತೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷ ನಾನಾ ಪಟೋಲೆ ಈಚೆಗೆ ಹೇಳಿಕೆ ನೀಡಿದ್ದರು.

ಜೋಗೇಶ್ವರಿ ಸಿವಿಕ್ ಲ್ಯಾಂಡ್ ಐಷಾರಾಮಿ ಹೋಟೆಲ್ ಪ್ರಕರಣದಲ್ಲಿ ಶಿಂದೆ ನೇತೃತ್ವದ ಶಿವಸೇನೆಯ ಮುಂಬೈ ವಾಯವ್ಯ ಲೋಕಸಭಾ ಕ್ಷೇತ್ರದ ಸಂಸದ ರವೀಂದ್ರ ವೈಕರ್‌ಗೆ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು (ಇಒಡಬ್ಲ್ಯು) ಕ್ಲೀನ್‌ಚಿಟ್ ನೀಡಿದ್ದಕ್ಕೆ ಸಂಬಂಧಿಸಿದಂತೆ ಪಟೋಲೆ ಅವರು ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿದ್ದರು ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT