ಕೋಯಿಕ್ಕೋಡ್: ಎಲ್ಕೆಜಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ 56 ವರ್ಷದ ವ್ಯಕ್ತಿಗೆ ನಾದಪುರಂ ವಿಶೇಷ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

2021ರ ನವೆಂಬರ್ನಲ್ಲಿ ಗೂಡ್ಸ್ ಆಟೊದಲ್ಲಿ ಬಾಲಕಿಯೊಬ್ಬಳನ್ನು ಕರೆದೊಯ್ದಿದ್ದ ಈ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ಬೆಳಕಿಗೆ ಬಂದ ಕೂಡಲೇ ಈತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು.

ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಸುಹೈಬ್ ಅವರು, ಅಪರಾಧಿಗೆ ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸಿದ್ದಾರೆ. ಇದರಲ್ಲಿ 20 ವರ್ಷ ಜೈಲು ಶಿಕ್ಷೆಯ ಜತೆಗೆ ₹65 ಸಾವಿರ ದಂಡವನ್ನೂ ವಿಧಿಸಿದ್ದಾರೆ.

ಈ ಪ್ರಕರಣದ ಅಪರಾಧಿ ಈ ಹಿಂದೆಯೂ ಕೆಲ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಶಿಕ್ಷೆಗೆ ಗುರಿಯಾಗಿದ್ದ. ಒಂದು ಪ್ರಕರಣದಲ್ಲಿ 5 ವರ್ಷ ಹಾಗೂ ಮತ್ತೊಂದು ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಈತ ಮತ್ತೆ ಅಂಥದ್ದೇ ಕೃತ್ಯ ಎಸಗಿದ್ದಾನೆ ಎಂದು ಸರ್ಕಾರಿ ಅಭಿಯೋಜಕ ಮನೋಜ್ ಅರೂರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.