ಹೈದರಾಬಾದ್: ಸರ್ಕಾರಿ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸುವ ಮೂಲಕ ವೇದಿಕೆಯನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಐಟಿ ಸಚಿವ ಕೆ.ಟಿ ರಾಮರಾವ್ ಅವರಿಗೆ ಚುನಾವಣಾ ಆಯೋಗ ಶನಿವಾರ ನೋಟಿಸ್ ನೀಡಿದೆ.

ಕಾಂಗ್ರೆಸ್‌ನ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ದೂರನ್ನು ಆಧರಿಸಿ ನೋಟಿಸ್ ನೀಡಲಾಗಿದ್ದು, ಇಂದು( ಭಾನುವಾರ) ಮಧ್ಯಾಹ್ನದೊಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ಕೆಟಿಆರ್‌ಗೆ ಸೂಚಿಸಿದೆ.

ಟಿ-ವರ್ಕ್ಸ್ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ಕೆಟಿಆರ್ ಸಂವಾದ ನಡೆಸಿದ್ದಾರೆ. ಅಧಿಕೃತ ಭೇಟಿಯನ್ನು ಖಾಸಗಿ ಅಥವಾ ರಾಜಕೀಯವಾಗಿ ಸಂಯೋಜಿಸಬಾರದು ಎಂದು ಚುನಾವಣಾ ಆಯೋಗ ನೀತಿ ಸಂಹಿತೆಯ ನಿಬಂಧನೆಯನ್ನು ಉಲ್ಲೇಖಿಸಿದೆ.

ಇಂದು (ಭಾನುವಾರ) ಮಧ್ಯಾಹ್ನ 3 ಗಂಟೆಯೊಳಗೆ ಸರ್ಕಾರಿ ಸಂಸ್ಥೆಗೆ ಭೇಟಿ ನೀಡಿದ ಬಗ್ಗೆ ತಮ್ಮ ನಿಲುವನ್ನು ವಿವರಿಸಲು ಆಯೋಗವು ರಾಮರಾವ್ ಅವರಿಗೆ ತಿಳಿಸಿದೆ. ಒಂದು ವೇಳೆ ನಿಗದಿತ ಸಮಯಕ್ಕೆ ಉತ್ತರ ನೀಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದೆ.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಮಾತ್ರವಲ್ಲದೇ, ಕೆ.ಟಿ ರಾಮರಾವ್ ಸ್ಟಾರ್ ಪ್ರಚಾರಕರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.